Wednesday, January 22, 2025
ಸುದ್ದಿ

ನೆರೆ ಪರಿಹಾರಕ್ಕೆ 1 ದಿನದ ವೇತನ ನೀಡಲು ಮುಂದಾದ ಸರ್ಕಾರಿ ನೌಕರರ ಸಂಘ-ಕಹಳೆ ನ್ಯೂಸ್

ಬೆಂಗಳೂರು : ಪ್ರವಾಹ ಸಂತ್ರಸ್ತರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ ಒಂದು ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ಮಳೆಯಿಂದ ನೂರಾರು ಹಳ್ಳಿಗಳು ಜಲಾವೃತಗೊಂಡಿದ್ದು, ಜನರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ 5.40 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿದ್ದು, ಒಂದು ದಿನದ ವೇತನ ಸುಮಾರು 150 ಕೋಟಿ ರೂ. ಗಳನ್ನು ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದು ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಬಾರಿ ಕೊಡುಗು ಪ್ರವಾಹಕ್ಕೆ ಸಂಘದಿಂದ ನೀಡಲಾಗಿದ್ದ ಸಂತ್ರಸ್ತ ನಿಧಿಯ ಮಾದರಿಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜರನ ನೆರವಿಗಾಗಿ ಈ ಬಾರಿಯೂ ಸಹ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡುವ ಕುರಿತು ಭರವಸೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು