Wednesday, January 22, 2025
ಸುದ್ದಿ

ಬೆಂಗಳೂರಲ್ಲೂ ರೆಡ್ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಕರ್ನಾಟಕದಲ್ಲಿ ಜನರು ಪ್ರವಾಹದಿಂದ ತತ್ತರಿಯಿಸಿ ಹೋಗಿದ್ದಾರೆ. ಇದೀಗ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಸುಮಾರು 80 ಸ್ಥಳಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ರವಾನಿಸಲಾಗಿದೆ. ಮಳೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಅಲರ್ಟ್ ಆಗಿರುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲೆಲ್ಲಿ ಅಂದ್ರೆ ಮಾನ್ಯತಾ ಟೆಕ್ ಪಾರ್ಕ್, ಮಂತ್ರಿ ಮಾಲ್, ಸಿಲ್ಕ್ ಬೋರ್ಡ್ ಜಂಕ್ಷನ್, ಯಶವಂತ ಪುರ್ ಟಿಟಿಎಂಸಿ, ಜೆಸಿ ರೋಡ್, ಕೋರಮಂಗಲ 4ನೇ ಬ್ಲಾಕ್, ಗ್ಲೋಬಲ್ ವಿಲೇಜ್ ಮೊದಲಾದ ಪ್ರದೇಶಗಳಿಗೆ ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು