Wednesday, January 22, 2025
ರಾಜಕೀಯ

ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನೆರೆಹಾನಿ ಪ್ರದೇಶದಲ್ಲಿ ಎರಡು ದಿನ ಸಮೀಕ್ಷೆ ನಡೆಸಲಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಲವೆಡೆ ಮಳೆ, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾರೂ ಆತಂಕಕ್ಕೆ ಒಳಗಾಗಬೇಡಿ. ಅಧಿಕಾರಿಗಳು ಹೆಚ್ಚುವರಿ ನೆರವು ಪಡೆಯಲು ವರದಿ ಸಿದ್ಧಪಡಿಸುತ್ತಿದ್ದಾರೆ. ತಾತ್ಕಾಲಿಕ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿದೆ. ದೆಹಲಿಗೆ ಎರಡು ದಿನ ಹೋಗುವುದಿಲ್ಲ. ಇಲ್ಲೇ ಇರುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಪ್ರವಾಹ ಪರಿಸ್ಥಿತಿ, ಮಳೆ, ನೆರೆ ಹಾನಿ, ರಕ್ಷಣಾ ಕಾರ್ಯ, ಪರಿಹಾರ ಕಾರ್ಯ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು