Recent Posts

Monday, November 25, 2024
ರಾಜಕೀಯ

ಕಾಶ್ಮೀರದ ಕ್ಯಾತೆ ತೆಗೆದ ಇಮ್ರಾನ್‍ನನ್ನು ನಡುನೀರಲ್ಲಿ ಕೈಬಿಟ್ಟ ಅಮೆರಿಕ, ಚೀನಾ, ವಿಶ್ವಸಂಸ್ಥೆ- ಕಹಳೆ ನ್ಯೂಸ್

ಜಮ್ಮು ಕಾಶ್ಮೀರಕ್ಕೆ ನೀಡಲಾದ 370ನೇ ವಿಧಿ ತೆರವುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಲು ಮುಂದಾಗಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ, ಅಮೆರಿಕ ಹಾಗೂ ಚೀನಾ ಕೈಕೊಟ್ಟಿದೆ. ಇದರೊಂದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳು ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಆಗಸ್ಟ್ 6ರಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿ ಭಾರತದ ತನ್ನ ನಿರ್ಧಾರವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಪತ್ರ ಬರೆದಿದ್ದರು.

ಇದಕ್ಕೆ ಪ್ರತಿಯಾಗಿ ಭಾರತ ಕೂಡ ವಿಶ್ವಸಂಸ್ಥೆಯಲ್ಲಿ ತನ್ನ ರಾಯಭಾರ ಪ್ರಭಾವವನ್ನು ಬಳಸಿತ್ತು. 1954ರಲ್ಲೇ 370ನೇ ವಿಧಿಯನ್ನು ಭಾರತೀಯ ಸಂವಿಧಾನದ ಒಳಗೆ ಸೇರಿಸಲಾಗಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ಈ ವಿಚಾರವಾಗಿ ನಿರ್ಣಯ ಮಂಡನೆಯಾದ ಆರು ವರ್ಷಗಳ ಬಳಿಕ ಭಾರತ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಭಾರತ ತಿಳಿಸಿದ್ದು. ಹೀಗಾಗಿ ವಿಶ್ವಸಂಸ್ಥೆ ಪಾಕಿಸ್ತಾನ ಮನವಿಯನ್ನು ಸಾರಸಗಟಾಗಿ ತಿರಸ್ಕರಿಸಿ ಈ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ ಅಂತಾ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಅಮೆರಿಕ ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ತಿಳಿಸಿತ್ತಾದರೂ ಕಾಶ್ಮೀರ ವಿಚಾರದಲ್ಲಿ ಭಾರತದ ನಿರ್ಧಾರವನ್ನು ಪ್ರಶ್ನಿಸುವ ಗೋಜಿಗೆ ಹೋಗುವುದಿಲ್ಲ. ಇನ್ನು ಪಾಕಿಸ್ತಾನದ ಬೆನ್ನೆಲುಬಾಗಿ ನಿಂತಿದ್ದ ಚೀನಾ ಕೂಡ ಈ ವಿಚಾರದಲ್ಲಿ ಪಾಕಿಸ್ತಾನದ ನಿರೀಕ್ಷೆಗೆ ವಿರುದ್ಧವಾಗಿ ನಿಂತಿದ್ದು ಪಾಕಿಸ್ತಾನ ಕಾಶ್ಮೀರದ ವಿಚಾರದಲ್ಲಿ ಸದ್ಯದ ಮಟ್ಟಿಗೆ ಏಕಾಂಗಿಯಾಗಿರೋದು ಸ್ಪಷ್ಟವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು