Sunday, November 17, 2024
ಸುದ್ದಿ

ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ – ನಳೀನ್ ಕುಮಾರ್ ಕಟೀಲ್

 

ಮಂಗಳೂರು : ಇದೇ ತಿಂಗಳ 19 ಮತ್ತು 20ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ನಳಿನ್ ಕಮಾರ್ ಕಟೀಲು ತಿಳಿಸಿದ್ದಾರೆ.
ನಗರದ ಪ್ರೆಸ್​ಕ್ಲಬ್​ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 19ರ ಸಂಜೆ 6 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕರಾದ ಜೆ.ಆರ್.ಲೋಬೋ, ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸಾಕ್ಷಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಸುಮಾರು 400ಕ್ಕೂ ಅಧಿಕ ಕಲಾವಿದರು ತಮ್ಮ ರಾಜ್ಯಗಳ ಸಾಂಸ್ಕೃತಿಕ ಕಲಾ ವೈಭವವನ್ನು ಪ್ರದರ್ಶಿಸಲಿದ್ದಾರೆ. ಇದರ ಜೊತೆ ವಿವಿಧ ರಾಜ್ಯಗಳ ಕರಕುಶಲ ವಸ್ತುಗಳ ಪ್ರದರ್ಶನವನ್ನೂ ಆಯೋಜಿಸಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response