Monday, November 25, 2024
ಸುದ್ದಿ

ಮಳೆಯ ಪ್ರಮಾಣ ಕಮ್ಮಿಯಾದರೂ, ನದಿಗಳ ಅಪಾಯ ಮಟ್ಟ ಕಮ್ಮಿಯಾಗಿಲ್ಲ –ಕಹಳೆ ನ್ಯೂಸ್

ರಾಜ್ಯದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಪ್ರಮಾಣ ಕಮ್ಮಿಯಾದರೂ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಬೆಳಗಾವಿಯಲ್ಲಿ 7 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ, ವೇದಗಂಗಾ, ದೂದಗಂಗಾ, ಮಲಪ್ರಭಾ, ಘಟಪ್ರಭಾ ನದಿಗಳು ಸೇರಿದಂತೆ ಏಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗಾವಿ ಜಿಲ್ಲೆಯ 14 ತಾಲೂಕಿನ 245ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಜಿಲ್ಲೆಯ ನೆರೆ ಬಾಧಿತ ಪ್ರದೇಶಗಳಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಜೊತೆ ಇರಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳ್ಳಾರಿ ಜಿಲ್ಲೆಯ ಕಂಪ್ಲಿ ಕೋಟೆ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಗೊಂಡಿದೆ. ಕಂಪ್ಲಿ ಮತ್ತು ಗಂಗಾವತಿ ನಡುವಿನ ಸಂಚಾರ ಸ್ಥಗಿತವಾಗಿದೆ. ತುಂಗಭದ್ರಾ ಜಲಾಶಯಕ್ಕೆ ತುಂಗಾ ಮತ್ತು ಭದ್ರ ಜಲಾಶಯದಿಂದ ಸುಮಾರು 2 ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

ತುಂಗಭದ್ರಾ ನದಿ ಪಾತ್ರದ ಕೋಟೆ ಪ್ರದೇಶದ ಆಂಜನೇಯ ದೇವಸ್ಥಾನ, ನೂರಾರು ಮನೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇಂದು ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮಿಸಲಿದ್ದು, ನಾನು ಅಲ್ಲಿಗೆ ಹೋಗುತ್ತಿದ್ದೇನೆ. ಬೆಳಗಾವಿ, ಬಾಗಲಕೋಟೆ ಮತ್ತು ಇತರ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇವೆ. ಅವರು ದೆಹಲಿಗೆ ಹೋದ ನಂತರ ನಾನು ಬೆಂಗಳೂರಿಗೆ ವಾಪಸ್ಸಾಗುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ನಿನ್ನೆ ರಾಜ್ಯದ 80 ತಾಲ್ಲೂಕುಗಳು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದ್ದು, ಈ ಕಡೆಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.