Recent Posts

Tuesday, November 26, 2024
ಸುದ್ದಿ

ಇಂದು ಬೆಳ್ತಂಗಡಿ, ಬಂಟ್ವಾಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಳೆಹಾನಿ ಪರಿಶೀಲನೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಈಗ ಶಾಂತವಾಗಿ ಹರಿಯುತ್ತಿವೆ. ನದಿ ಪ್ರವಾಹದಿಂದ ನಲುಗಿದ್ದ ಬಂಟ್ವಾಳ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ ಪ್ರವಾಹದ ನೀರು ಇಳಿದಿದೆ. ಈ ನಡುವೆ ಮಳೆಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ 11.40ರ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ನೇರವಾಗಿ ಬಂಟ್ವಾಳದ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಲಿದ್ದಾರೆ. ನಂತರ ಬೆಳ್ತಂಗಡಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಾಹ್ನ 2.30ರಿಂದ ಧರ್ಮಸ್ಥಳದಲ್ಲಿ ನೆರೆ ಹಾವಳಿಯ ಪರಿಹಾರ ಕ್ರಮಗಳ ಕುರಿತಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು