Sunday, November 24, 2024
ಸುದ್ದಿ

ಅತಿವೃಷ್ಠಿ, ಪ್ರವಾಹದಿಂದ ಕೆ.ಎಸ್.ಆರ್.ಟಿ.ಸಿ. ಗೆ 3.30 ಕೋಟಿ ರೂ. ನಷ್ಟ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 3.30 ಕೋಟಿ ರೂ ನಷ್ಟ ಸಂಭವಿಸಿದೆ. ಮೊದಲೇ ನಷ್ಟದಲ್ಲಿದ್ದ ಇಲಾಖೆಗೆ ಪ್ರಾಕೃತಿಕ ವಿಕೋಪವು ಮತ್ತಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ.

ಆಗಸ್ಟ್ ಮೊದಲ ವಾರದಿಂದ ಆಗಸ್ಟ್ 10ರ ವರೆಗೆ ನಿಗಮದ ಬಸ್ಸುಗಳ 1545 ಅನುಸೂಚಿಗಳನ್ನು ರದ್ದುಪಡಿಸಲಾಗಿದೆ. ಅಂದಾಜು 9,44,792 ಕಿ.ಮೀ ಸಂಚಾರವನ್ನು ಮಳೆ ಹಾಗೂ ಪ್ರವಾಹದಿಂದಾಗಿ ತಡೆಹಿಡಿಯಲಾಗಿದೆ. 16 ವಿಭಾಗಗಳಿಂದ ಒಟ್ಟು 4140 ಅನುಸೂಚಿಗಳನ್ನು ರದ್ದುಪಡಿಸಿದ್ದು, ಪೂರ್ಣ ಪ್ರಮಾಣದಲ್ಲಿ 1545 ಅನುಸೂಚಿಗಳು (ಷೆಡ್ಯುಲ್ಸ್) ಹಾಗೂ ಭಾಗಶಃ 2595 ಅನುಸೂಚಿಗಳನ್ನು ರದ್ದುಪಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆರೆ ಪ್ರಮಾಣ ಕಡಿಮೆಯಾಗಿ, ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಸಿಕ್ಕರೆ ತಕ್ಷಣದಿಂದಲೇ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನು ಓಡಿಸಲು ಇಲಾಖೆ ಸಿದ್ದವಾಗಿದೆ. ಅಲ್ಲದೆ ಈಗಾಗಲೆ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ಪೂರೈಸಲು ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ರವಾನೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು