ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಮುನ್ಸೂಚನೆ: ಆಗಸ್ಟ್ 13 ಮತ್ತು 14 ಶಾಲಾ-ಕಾಲೇಜಿಗೆ ರಜೆ ಘೋಷಣೆ – ಕಹಳೆ ನ್ಯೂಸ್
ಕೊಡಗು: ಈಗಾಗಲೇ ಪ್ರಕೃತಿಯ ಮುನಿಸಿನಿಂದ ತತ್ತರಿಸಿ ಹೋಗಿರುವ ಕೊಡಗಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನ ಬಹುತೇಕ ಕಡೆ ಭಾರಿ ಮಳೆಯಾಗಿದ್ದು, ನದಿಗಳು ಹರಿದುಕ್ಕುತ್ತಿವೆ. ಮತ್ತೊಂದೆಡೆ ಪ್ರವಾಹ ಜನತೆಯನ್ನು ಕಂಗಾಲಾಗಿಸಿದೆ. ಇನ್ನು ಕೆಲವೆಡೆ ಭೂಕುಸಿತ, ಗುಡ್ಡ ಕುಸಿತ ಆತಂಕ ತಂದೊಡ್ಡಿದೆ. ಇದರ ಬೆನ್ನಲ್ಲೇ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ 5ದಿನಗಳ ಕಾಲ ಕೊಡಗು ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರದಿ ಆಧರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕೊಡಗಿನ ಬಹುತೇಕ ಶಾಲೆಗಳಲ್ಲಿ ನಿರಾಶ್ರಿತರ ಶಿಬಿರ ತೆರೆದಿರುವ ಹಿನ್ನೆಲೆ ಆಗಸ್ಟ್ 13 ಮತ್ತು 14 ರಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜು-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.