ನೆರೆ ಸಂತ್ರಸ್ತರಿಗೆ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ – ಕಹಳೆ ನ್ಯೂಸ್
ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನೆರೆ ಪೀಡಿತ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಚರ್ಚಿಸುವ ವೇಳೆಯಲ್ಲಿ ಈ ಹೇಳಿಕೆ ನೀಡುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಈ ಸರ್ಕಾರವನ್ನು ಉಳಿಸುವುದಿಲ್ಲ. ನಿಮಗೆ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು ಎಂದು ನೆರೆ ಸಂತ್ರಸ್ತರಿಗೆ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.