Sunday, January 19, 2025
ಸುದ್ದಿ

ಆ. 14ರಂದು ಬೆಳಂದೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ನಿವೃತ್ತ ಸೈನಿಕರಿಗೆ ವಿಶೇಷ ಗೌರವಾರ್ಪಣೆ- ಕಹಳೆ ನ್ಯೂಸ್

ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳ ಬೆಳಂದೂರು ವಲಯ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಆ.14 ರಂದು ನಡೆಯಲಿದೆ.

ಕಾಣಿಯೂರಿನಲ್ಲಿ ಸಂಜೆ ಗಂಟೆ 6ಕ್ಕೆ ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತ ಜಿನ್ನಪ್ಪ ಗೌಡ ಕಳುವಾಜೆಯವರು ಮೆರವಣಿಗೆಗೆ ಚಾಲನೆ ನೀಡಲಿದ್ದು, ಕಾಣಿಯೂರು ಪೇಟೆಯಿಂದ ಹೊರಟು ಬೆಳಂದೂರು ರಸ್ತೆಯಲ್ಲಿ ಸುಮಾರು 6 ಕಿ.ಮೀ ದೂರ ಸಾಗಿ ಕುದ್ಮಾರಿನಲ್ಲಿ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ ಮತ್ತು ಸಭಾ ಕಾರ್ಯಕ್ರಮದೊಂದಿಗೆ ಸಮಾಪನೆಗೊಳ್ಳಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು