ಮಂಗಳೂರು : ನಗರದ ಉಲಾಯಿಬೆಟ್ಟುವಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಮನ್ಸ್ ಜಾರಿಯಾಗಿದೆ.
2014 ಡಿ. 07 ರಂದು ಉಲಾಯಿಬೆಟ್ಟುವಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ಕೃತ್ಯವನ್ನು ವಿರೋಧಿಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯ ವೇಳೆ ಸೆಕ್ಸನ್ ಜಾರಿಯಾಗಿತ್ತು. ಈ ವೇಳೆ ಸೆಕ್ಷನ್ ಉಲ್ಲಂಘಿಸಿ ಪ್ರತಿಭಟನಕಾರರು ಪ್ರತಿಭಟಿಸಿದ್ದರು. ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.
ಸೆಕ್ಷನ್ ಉಲ್ಲಂಘಿಸಿದ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದಾಗಿ ನಾಲ್ಕು ವರ್ಷದ ಬಳಿಕ ಸ್ವಾಮೀಜಿಗೆ ಸಮನ್ಸ್ ಜಾರಿಯಾಗಿದೆ. ಕೈ ಬಿಟ್ಟ ಪ್ರಕರಣವನ್ನು ನಾಲ್ಕು ವರ್ಷದ ನಂತರ ಮತ್ತೇ ತೆರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.