Recent Posts

Sunday, January 19, 2025
ಸುದ್ದಿ

ಮಾಜಿ ಸಚಿವ ರಮಾನಾಥ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಕುರಿತು ಗ್ರಾಮಾಂತರ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಬಂಟ್ವಾಳ: ತೀವ್ರ ಮಳೆಯಿಂದಾಗಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ದೋಣಿಯಲ್ಲಿ ತೆರಳಿದ, ಮಾಜಿ ಶಾಸಕ ರಮಾನಾಥ ರೈಯವರ ವೀಡಿಯೋ ಚಿತ್ರೀಕರಣವನ್ನು, ತಿರುಚಿ ಗಣಪತಿ ದೇವರ ವಿಸರ್ಜನೆಯ ರೂಪದಲ್ಲಿ ವ್ಯಂಗ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹಾಗೂ ಹಿಂದೂ ಆರಾಧ್ಯ ದೇವರ ಅಪಹಾಸ್ಯ ಮಾಡಿ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರಿಸಿದ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಿ ತಕ್ಕ ಶಿಕ್ಷೆ ನೀಡಬೇಕಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಗಂಗಾಧರ್ ಪೂಜಾರಿ ಹಾಗೂ ಲೋಲಾಕ್ಷ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು