Tuesday, January 21, 2025
ಸುದ್ದಿ

ಫಿಲೋಮಿನಾದಲ್ಲಿ ಸ್ವಾತಂತ್ರ್ಯೋತ್ಸವ, ಪರಿಸರ ಜಾಗೃತಿ ಜಾಥಾ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಪ್ರಾಂಗಣದಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ನಡೆಸಲಾಗಿದೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಧ್ಯಜಾರೋಹಣಗೊಳಿಸಿ, ಎನ್‍ಸಿಸಿ ಕೆಡೆಟ್‍ಗಳು, ರೋವರ್ಸ್-ರೇಂಜರ್ಸ್ ಮತ್ತು ಎನ್‍ಎಸ್‍ಎಸ್ ಸ್ವಯಂಸೇವಕರಿಂದ ಗೌರವ ವಂದನೆಯನ್ನು ಸ್ವೀಕರಿಸಲಿದ್ದಾರೆ. ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಡಾ. ಎ ಪಿ ರಾಧಾಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸಂದೇಶ ನೀಡಲಿರುವರು. ಕ್ಯಾಂಪಸ್ ನಿರ್ದೇಶಕ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿಜಯ್ ಲೋಬೊ, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿರುವರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳ ಗಾಯನ ಮತ್ತು ನೃತ್ಯ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಬಳಿಕ ಕಾಲೇಜಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪರಿಸರ ಜಾಗೃತಿ ಜಾಥಾವನ್ನು ಅಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು