Monday, January 20, 2025
ಸುದ್ದಿ

73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿಎಸ್‍ವೈ ಧ್ವಜಾರೋಹಣ – ಕಹಳೆ ನ್ಯೂಸ್

ಬೆಂಗಳೂರು: 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದ್ದಾರೆ.

ಬೆಳಗ್ಗೆ 8.58ಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಆಗಮಿಸಿ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ಸಿಎಂ ಬಿಎಸ್‍ವೈ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1250 ಮಕ್ಕಳು ಭಾಗಿಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೇಡ್‍ನಲ್ಲಿ ಗೋವಾ ಪೊಲೀಸ್, ಬಿಎಸ್ ಎಟಫ್, ಸಿಆರ್ ಪಿಎಫ್, ಕೆಎಸ್, ಆರ್.ಪಿ ಕವಾಯತ್ತು ಪ್ರದರ್ಶನವನ್ನು ನೀಡಿದರು. ಭದ್ರತೆಗಾಗಿ 1906 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಮೈದಾನದ ಸುತ್ತ 50 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು