Saturday, November 23, 2024
ಸುದ್ದಿ

ಕೇರಳ ಮಳೆಗೆ ಅಸುನೀಗಿದವರ ಸಂಖ್ಯೆ 102- ಕಹಳೆ ನ್ಯೂಸ್

ಕೇರಳ: ಮಳೆ, ಪ್ರವಾಹಕ್ಕೆ ಅಸುನೀಗಿದವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಅದಕ್ಕೆ ಪೂರಕವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಲಪ್ಪುರಂ, ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತೀರ ಪ್ರದೇಶದ ವ್ಯಾಪ್ತಿಯಲ್ಲಿರುವ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆಯೂ ಎಚ್ಚರಿಕೆ ನೀಡಲಾಗಿದೆ.

ತಿರುವನಂತಪುರದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತತ್‍ಕ್ಷಣದ ಪರಿಹಾರವಾಗಿ ಸಂತ್ರಸ್ತರಿಗೆ ತಲಾ 10 ಸಾವಿರ ರೂ. ನೀಡಲಾಗುತ್ತದೆ. ಮನೆ ಮತ್ತು ಜಮೀನು ಕಳೆದುಕೊಂಡವರಿಗೆ 10 ಲಕ್ಷ, ಮನೆ ಕಳೆದುಕೊಂಡವರಿಗೆ 4 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ. ಶ1.95 ಲಕ್ಷ ಮಂದಿ 1,118 ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಹಲವು ದಿನಗಳಿಂದ ಧಾರಾಕಾರ ಮಳೆಗೆ ನಲುಗಿದ್ದ ಪಶ್ಚಿಮ ಮಹಾರಾಷ್ಟ್ರದ ಜಿಲ್ಲೆಗಳಾಗಿರುವ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳಲ್ಲಿ ನಿಧಾನವಾಗಿ ಪರಿಸ್ಥಿತಿ ಯಥಾಸ್ಥಿತಿಗೆ ಹಿಂತಿರುಗುತ್ತಿದೆ. ಹೆಚ್ಚಿನ ನದಿಗಳಲ್ಲಿನ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿವೆ. ಮಂಗಳವಾರದ ವರೆಗೆ 6.45 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು