Recent Posts

Monday, January 20, 2025
ಸುದ್ದಿ

ಫಿಲೋಮಿನಾದಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಸೊಸೈಟಿ, ಎನ್‍ಸಿಸಿ, ಎನ್‍ಎಸ್‍ಎಸ್, ರೋವರ್ಸ್-ರೇಂಜರ್ಸ್, ಸುರಕ್ಷಾ ಗ್ರಾಹಕ ವೇದಿಕೆ ಮತ್ತು ಪರಿಸರ ಸಂಘವು ಕಾಲೇಜಿನ ಐಕ್ಯೂಎಸಿಯ ಸಹಯೋಗದಲ್ಲಿ ಆಗಸ್ಟ್ 16 ರಂದು, ಅಪರಾಹ್ನ ಘಂಟೆ 3ಕ್ಕೆ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಬ್ಲಾಕ್ ಹೆಲ್ತ್ ಎಜ್ಯುಕೇಶನ್ ಆಫೀಸರ್ ಪದ್ಮಾವತಿ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ವಹಿಸಲಿದ್ದಾರೆ ಎಂದು ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು