Monday, January 20, 2025
ಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಪೂಜಾರಿಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಘೋಷ್ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾ ದ ಲೋಕಯ್ಯ ಷೇರಾ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರು, ಶ್ರೀರಾಮ ವಿದ್ಯಾ ಕೇಂದ್ರದ ಎಲ್ಲಾ ವಿಭಾಗದ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು