Recent Posts

Sunday, January 19, 2025
ಸುದ್ದಿ

26 ತಿಂಗಳುಗಳ ಬಳಿಕ ಶುರುವಾದ ಶಿರಾಡಿ ಘಾಟ್ ರಸ್ತೆ ಕಾಮಗಾರಿ – ಕಹಳೆ ನ್ಯೂಸ್

ಉಪ್ಪಿನಂಗಡಿ (ದಕ್ಷಿಣ ಕನ್ನಡ) : ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಕಳೆದ 26 ತಿಂಗಳುಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ 2ನೇ ಹಂತದ ಕಾಮಗಾರಿ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾಗಲಿದೆ.  63.10 ಕೋಟಿ ರೂ. ವೆಚ್ಚದ ಯೋಜನೆ ಪೂರ್ಣಗೊಳಿಸಲು ಜರ್ಮನಿಯಿಂದ ಹೊಸ ಯಂತ್ರ ತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಮಗಾರಿ ಆರಂಭಕ್ಕೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜೊತೆಗೆ ಗುತ್ತಿಗೆದಾರರು ಕಾಮಗಾರಿ ಆರಂಭಕ್ಕೆ ಬೇಕಾದ ಬಹುತೇಕ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಮಗಾರಿ ಕುರಿತಂತೆ ಮಾಹಿತಿ ನೀಡಿದ ಓಷಿಯನ್ ಕನ್‍ಸ್ಟ್ರಕ್ಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಆಲಿ, ಈ ಬಾರಿ ಕಡಿಮೆ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದರು.

2ನೇ ಹಂತದ ರಸ್ತೆ ಕಾಮಗಾರಿಯ ಹೈಲೈಟ್ಸ್ :

* 2ನೇ ಹಂತದ ರಸ್ತೆ ಕಾಮಗಾರಿಯ ಹೈಲೈಟ್ಸ್
* ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
* ಕೆಂಪುಹೊಳೆಯಿಂದ ಅಡ್ಡಹೊಳೆ ವರೆಗು 12.38 ಕಿ.ಮೀ ಕಾಂಕ್ರೀಟ್ ರಸ್ತೆ
* 2ನೇ ಹಂತದ ಕಾಮಗಾರಿಗೆ 2015ರಲ್ಲಿ 85.28 ಕೋಟಿ ರೂ. ಮಂಜೂರು
* 12.38 ಕಿ.ಮೀ. ರಸ್ತೆ ಕಾಂಕ್ರಿಟೀಕರಣಕ್ಕೆ 63.10 ಕೋಟಿ ರೂ.
* ಕಾಂಕ್ರೀಟ್ ರಸ್ತೆಯ 8.5 ಮೀಟರ್, ಡಾಂಬರೀಕರಣ ರಸ್ತೆಯ 7 ಮೀಟರ್ ಅಗಲ
* ಓಷಿಯನ್ ಕನ್‍ಸ್ಟ್ರಕ್ಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಕಾಮಗಾರಿ
* ಜರ್ಮನಿಯಿಂದ 7.5 ಕೋಟಿ ಮೌಲ್ಯದ ಅತ್ಯಾಧುನಿಕ ಹೊಸ ಯಂತ್ರ
* ಕಾಮಗಾರಿಗೆ ಶೇ.50ರಷ್ಟು ಕಚ್ಛಾ ವಸ್ತುಗಳ ಶೇಖರಣೆ

ವರದಿ : ಕಹಳೆ ನ್ಯೂಸ್

Leave a Response