Monday, January 20, 2025
ಸುದ್ದಿ

ಕಾಶ್ಮೀರಿಗರ ಸಂಭ್ರಮಕ್ಕೆ ಸ್ವಾತಂತ್ರ್ಯದ ಮೆರುಗು – ಕಹಳೆ ನ್ಯೂಸ್

ಶ್ರೀನಗರ: ಜಮ್ಮು, ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಕಣಿವೆ ರಾಜ್ಯವು ಗುರುವಾರ ಮೊದಲ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಲಿದೆ.

ರಾಜ್ಯಾದ್ಯಂತ ಶಾಂತಿಯುತವಾಗಿ ಸ್ವಾತಂತ್ರ್ಯ ದಿನ ಆಚರಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು ಜಮ್ಮು-ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಲ್ ತಿಳಿಸಿದ್ದು, ಎಲ್ಲರೂ ಅತ್ಯಂತ ಅದ್ದೂರಿ ಹಾಗೂ ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಬೇಕು ಎಂದು ನಾಗರಿಕರಿಗೆ ಕರೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಮ್ಮುವಿನಲ್ಲಿ ಎಲ್ಲ ರೀತಿಯ ನಿಬರ್ಂಧಗಳನ್ನೂ ತೆರವು ಮಾಡಲಾಗಿದ್ದು, ಕಾಶ್ಮೀರದ ಕೆಲವು ಪ್ರದೇಶಗಳನ್ನು ಇನ್ನೂ ಕೆಲವು ದಿನಗಳ ಕಾಲ ನಿಬರ್ಂಧ ಮುಂದುವರಿಯಲಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುನೀರ್ ಖಾನ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಡಿಯಲ್ಲಿ ಬಿಗಿಭದ್ರತೆ: ಸ್ವಾತಂತ್ರ್ಯದಿನದ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಸೇನೆ ಮತ್ತು ಬಿಎಸ್‍ಎಫ್ ಕಟ್ಟೆಚ್ಚರ ವಹಿಸಿದೆ. ಜಮ್ಮು ಭಾಗದಲ್ಲೂ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಭದ್ರತಾ ಪಡೆಗಳು ಪ್ರತಿಯೊಬ್ಬರನ್ನೂ ನಿಗಾ ವಹಿಸಿ ತಪಾಸಣೆ ನಡೆಸುತ್ತಿದೆ.