ಪುತ್ತೂರು: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ನಿವೃತ್ತ ಸೈನಿಕರಾದ ಶ್ರೀ ನಾಯಕ್ ರವಿಶಂಕರ್ ಯು. ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ದೇಶಾಭಿಮಾನವನ್ನು ಬೆಳೆಸಿಕೊಳ್ಳಬೇಕು. ಅದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಜೋಷಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾನೂನು ಕಾಲೇಜಿನ ಸಂಚಾಲಕ ವಿಜಯ ನಾರಾಯಣ ಕೆ. ಎಂ, ಸದಸ್ಯ ಯಶೋಧರ ಜೈನ್ ಮತ್ತು ಕಾಲೇಜಿನ ಪ್ರಾಂಶುಪಾಲ ಶ್ರೀಮತಿ ಅಕ್ಷತಾ ಎ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಜ್ನಾರಾಯಣ ಮಳಿ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.