Recent Posts

Sunday, January 19, 2025
ರಾಜಕೀಯ

ಕೊನೆಗೂ ಕೂಡಿಬಂತು ಸಚಿವ ಸಂಪುಟ ರಚನೆ ಭಾಗ್ಯ; ಸೋಮವಾರ ನೂತನ ಸಚಿವರ ಪ್ರಮಾಣ ವಚನ? – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡು ಮೂರು ವಾರಗಳು ಕಳೆದಿವೆ. ಕೊನೆಗೂ ಸಚಿವ ಸಂಪುಟ ರಚನೆಗೆ ಕಾಲ ಕೂಡಿಬಂದಂತಿದೆ.

ದೆಹಲಿಗೆ ತೆರಳಿದ ಸಿಎಂ ಯಡಿಯೂರಪ್ಪನವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ರಚನೆಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. ಯಡಿಯೂರಪ್ಪನವರು ಅಂದುಕೊಂಡಂತೆ ನಡೆದರೆ ನೂತನ ಸಚಿವ ಸಂಪುಟ ಸೋಮವಾರ 16 ಹೊಸ ಸಚಿವರುಗಳೊಂದಿಗೆ ರಚನೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾತಿ, ಪ್ರದೇಶವಾರು ಮತ್ತು ಪಕ್ಷದ ನಿಷ್ಠಾವಂತರನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ, ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆಯಿದೆ. ಇನ್ನೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್‍ನ 17 ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ. ಪಕ್ಷದ ಆಂತರಿಕ ಮೂಲಗಳಿಂದ ಸಿಕ್ಕಿರುವ ಮಾಹಿತಿಗಳು ನಿಜವಾದರೆ ಮೊದಲ ಬಾರಿಗೆ ಶಾಸಕರಾದವರು ಮತ್ತು ಮಹಿಳೆಯರಿಗೆ ಮೊದಲ ಬಾರಿಯ ಸಂಪುಟ ರಚನೆಯಲ್ಲಿ ಸಚಿವ ಸ್ಥಾನದ ಅವಕಾಶ ಸಿಗುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ಹಿರಿಯ ಬಿಜೆಪಿ ನಾಯಕರ ಒಪ್ಪಿಗೆ ಪಡೆದು ಪಟ್ಟಿ ಸಿದ್ದಪಡಿಸಲಾಗಿದ್ದು ಅಮಿತ್ ಶಾ ಅವರು ಈ ಪಟ್ಟಿಗೆ ಹೆಚ್ಚಿನ ಬದಲಾವಣೆ ಮಾಡದೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ವಿಧಾನಪರಿಷತ್ತಿನ ಇಬ್ಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವೈ ಎ ನಾರಾಯಣಸ್ವಾಮಿ, ಎನ್ ರವಿಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ.