ನವದೆಹಲಿ: ದೇಶದಲ್ಲಿ ಆರ್ಥಿಕ ಸ್ಥಿತಿಗತಿ ತೀವ್ರ ಮಟ್ಟಕ್ಕೆ ಕುಸಿದಿದ್ದ ಪರಿಣಾಮ ನೇರವಾಗಿ ಉದ್ಯೋಗ ಸೃಷ್ಟಿ ಮೇಲೆ ಪರಿಣಾಮ ಆಗಿದೆ. ಈ ಕುರಿತಂತೆ ಕ್ರಮ ಕೈಗೊಳ್ಳಲು ಇದೀಗ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಂತಿದೆ.
ಮೊನ್ನೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡ ಆರ್ಥಿಕ ಪರಿಸ್ಥಿತಿಯನ್ನು ಪರಾಮರ್ಶಿಸಿ, ದೇಶದ ಆರ್ಥಿಕತೆಯ ಪುನರುಜ್ಜೀವನಕ್ಕೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ನಿನ್ನೆ ಪ್ರಧಾನ ಮಂತ್ರಿ ಹಾಗೂ ಅರ್ಥ ಸಚಿವರ ನಡುವೆ ಸಭೆ ನಡೆದಿದೆ.
ಸಭೆಯಲ್ಲಿ ನಡೆದ ಮಾತುಕತೆಯ ಕುರಿತು ಮಾಹಿತಿ ಹೊರಬೀಳದಿದ್ದರೂ ಸಹ, ಹಣಕಾಸು ಸಚಿವಾಲಯ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಆರ್ಥಿಕತೆಯ ಕುಸಿತ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಕೆಲವು ಅಲ್ಪಾವಧಿಯ ಕ್ರಮಗಳನ್ನು ಸದ್ಯದಲ್ಲಿಯೇ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.