Recent Posts

Monday, January 20, 2025
ಸುದ್ದಿ

14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ವಾಪಸ್ – ಕಹಳೆ ನ್ಯೂಸ್

ಕೇರಳ: ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದ ಕೇರಳದಲ್ಲಿ ಬಿಸಿಲು ಕಾಣಿಸಿಕೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಸಂತ್ರಸ್ತರು ಪರಿಹಾರ ಶಿಬಿರಗಳಿಂದ ತಮ್ಮ ಮನೆಗಳಿಗೆ ವಾಪಸಾಗುತ್ತಿದ್ದಾರೆ. ಮಳೆ ಸಂಬಂಧಿ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ ಮತ್ತು 30 ಮಂದಿ ನಾಪತ್ತೆಯಾಗಿದ್ದಾರೆ.

ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ, 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ವಾಪಸ್ ಪಡೆಯಲಾಗಿದೆ. ಆದರೆ, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕವಳಪ್ಪಾರ ಹಾಗೂ ಪುತ್ತಮಲದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿಯುತ್ತಿದೆ. ಡ್ರೋನ್, ಶ್ವಾನದಳ ಹಾಗೂ ಆಧುನಿಕ ಉಪಕರಣ ಬಳಸಸಿಕೊಂಡು ಶೋಧ ಕಾರ್ಯ ಮಾಡಲಾಗುತ್ತಿದೆ. 1057 ಪರಿಹಾರ ಕೇಂದ್ರಗಳಲ್ಲಿ 1 ಲಕ್ಷದ 75 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು