Monday, November 25, 2024
ಸುದ್ದಿ

ಆಂಬುಲೆನ್ಸ್ ಗೆ ದಾರಿ ತೋರಿಸಿ ಧೈರ್ಯ ಪ್ರದರ್ಶಿಸಿದ ಬಾಲಕನಿಗೆ ‘ಸಾಹಸ ಸೇವಾ ಪ್ರಶಸ್ತಿ’ – ಕಹಳೆ ನ್ಯೂಸ್

ರಾಯಚೂರು: ಕೃಷ್ಣಾ ನದಿ ಪ್ರವಾಹದ ನೀರಿನಲ್ಲಿ ಆಂಬುಲೆನ್ಸ್ ಗೆ ದಾರಿ ತೋರಿಸಿ ಸಾಹಸ ಮೆರೆದಿದ್ದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ‘ಸಾಹಸ ಸೇವಾ ಪ್ರಶಸ್ತಿ’ ನೀಡಿ ಗೌರವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಗುರುವಾರ ನಡೆದ ಧ್ವಜಾರೋಹಣದ ವೇಳೆ ಬಾಲಕ ವೆಂಕಟೇಶ್‍ನಿಗೆ ಜಿಲ್ಲಾಧಿಕಾರಿ ಶರತ್.ಬಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷ್ಣಾ ನದಿಯಿಂದ ಉಂಟಾದ ಪ್ರವಾಹಕ್ಕೆ ದೇವದುರ್ಗ ತಾಲ್ಲೂಕಿನ ಹಿರೇರಾಯಕುಂಪಿ – ಗೂಗಲ್ ಸೇತುವೆ ಮುಳುಗಡೆಯಾಗಿತ್ತು. ಈ ವೇಳೆ ಮುಳುಗಡೆಯಾದ ಸೇತುವೆಯಲ್ಲಿ ಮೃತದೇಹ ಹೊತ್ತು ಬರುತ್ತಿದ್ದ ಆಂಬುಲೆನ್ಸ್ ಚಾಲಕನಿಗೆ ರಸ್ತೆ ಎಲ್ಲಿದೆ ಎಂಬುದು ಗೊತ್ತಾಗುತ್ತಿರಲಿಲ್ಲ.

ಈ ಸಂದರ್ಭದಲ್ಲಿ ಬಾಲಕ ತನ್ನ ಜೀವದ ಹಂಗೂ ತೊರೆದು ನೀರಿನಲ್ಲಿ ನಡೆದು ದಾರಿ ತೋರಿಸುವ ಮೂಲಕ ಸಹಾಯ ಮಾಡಿದ್ದನು. ಬಾಲಕನ ಸಾಹಸದ ಬಗ್ಗೆ ತಿಳಿದ ಜಿಲ್ಲಾಡಳಿತ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಾಲಕನಿಗೆ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಇಂದು ನಡೆದ ಧ್ವಜಾರೋಹಣದ ವೇಳೆ ಜಿಲ್ಲಾಡಳಿತ ಬಾಲಕನಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದೆ.