Monday, January 20, 2025
ಸುದ್ದಿ

370ನೇ ವಿಧಿ ರದ್ಧು – ಪಾಕ್, ಚೀನಾ ಬೇಡಿಕೆಯಂತೆ ವಿಶ್ವಸಂಸ್ಥೆಯಲ್ಲಿ ರಹಸ್ಯ ಸಭೆ – ಕಹಳೆ ನ್ಯೂಸ್

Security Council meeting Maintenance of international peace and security Vote

ವಿಶ್ವಸಂಸ್ಥೆ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 7.30ಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ ಕುರಿತು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಜೋನ್ನಾ ವ್ರೋ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಭಾರತ-ಪಾಕಿಸ್ತಾನ ಸೇರಿದಂತೆ ಇಡೀ ಏಷಿಯಾ ಖಂಡದ ಕಣ್ಣು ವಿಶ್ವಸಂಸ್ಥೆ ಸಭೆಯತ್ತ ನೆಟ್ಟಿದೆ. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ, ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಪತ್ರ ಬರೆದಿರುವುದಾಗಿ ಹೇಳಿದ ಬೆನ್ನಲ್ಲೇ ಯುಎನ್‍ಸಿ ರಹಸ್ಯ ಸಭೆ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಪಾಕಿಸ್ತಾನ ಕಾಶ್ಮೀರದ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾಪಿಸುವಂತೆ ಮಿತ್ರ ರಾಷ್ಟ್ರ ಚೀನಾಕ್ಕೂ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಅಧ್ಯಕ್ಷ ರಾಷ್ಟ್ರ ಪೋಲೆಂಡ್‍ಗೆ ಪತ್ರ ಬರೆದಿರುವ ಚೀನಾ, ಕಾಶ್ಮೀರ ಕುರಿತು ಗೌಪ್ಯ ಸಭೆ ಆಯೋಜಿಸುವಂತೆ ಆಗ್ರಹಿಸಿದೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಜಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದೆ. ಇದಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಾರತದ ಕ್ರಮ ಕಾನೂನು ಬಾಹಿರ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ ಎಂದು ಆರೋಪಿಸಿದೆ.

ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಇಂದು ರಾತ್ರಿ ನಡೆಯಲಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಗೌಪ್ಯ ಸಭೆಯಲ್ಲಿ ಚರ್ಚೆಯಾಗುವ ವಿಚಾರದ ಕುರಿತು ಎಲ್ಲರ ಚಿತ್ತ ನೆಟ್ಟಿದೆ.