Monday, January 20, 2025
ಸುದ್ದಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ – ಕಹಳೆ ನ್ಯೂಸ್

ಅಡ್ಯನಡ್ಕ: ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆ. 15ರಂದು ಜರುಗಿತು.

ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಉಪಸ್ಥಿತರಿದ್ದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ವಂದಿಸಿದರು. ‘ಯಂಗ್ ಸ್ಟಾರ್’ ಅಡ್ಯನಡ್ಕ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ಭಾಷಣ ಮತ್ತು ಸಮೂಹ ನೃತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪೆರೇಡ್ ಹಾಗೂ ಅಡ್ಯನಡ್ಕ ಪೇಟೆಯಲ್ಲಿ ಮೆರವಣಿಗೆ ನಡೆಯಿತು.