ನವದೆಹಲಿ – ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಏಮ್ಸ್ ಗೆ ತೆರಳಿ ಅರುಣ್ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದರು.
ಆ.9ರಂದು ತೀವ್ರ ನಿತ್ರಾಣಗೊಂಡು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅಂದೇ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಆಸ್ಪತ್ರೆಗೆ ಭೇಟಿ ನೀಡಿ, ಜೇಟ್ಲಿ ಅವರು ಆರೋಗ್ಯ ವಿಚಾರಿಸಿದ್ದರು.
ತೀವ್ರ ನಿಗಾ ಘಟಕದಲ್ಲಿರುವ 66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎಂಡೋಕ್ರಿನೋಲಾಜಿಸ್ಟ್, ನೆಪ್ರೊಲಾಜಿಸ್ಟ್ ಮತ್ತು ಕಾರ್ಡಿಯಾಲಜಿಸ್ಟ್ ಗಳ ತಂಡ ಚಿಕಿತ್ಸೆ ನೀಡುತ್ತಿದೆ. ಕಳೆದ ವರ್ಷ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಜ್ಯಸಭಾ ಸದಸ್ಯ ಅರುಣ್ ಜೇಟ್ಲಿ ಹಲವು ತಿಂಗಳ ಕಾಲ ರಾಜಕೀಯದಿಂದ ದೂರವೇ ಉಳಿದಿದ್ದರು. ಅದೇ ಕಾರಣದಿಂದಲೇ ಕಳೆದ ಬಾರಿ ಅರುಣ್ ಜೇಟ್ಲಿ ಅವರ ಬದಲಾಗಿ ಹಂಗಾಮಿ ವಿತ್ತ ಸಚಿವರಾಗಿದ್ದ ಪಿಯೂಶ್ ಗೋಯಲ್ ಅವರೇ ಕೇಂದ್ರ ಬಜೆಟ್‍ನ್ನು ಮಂಡಿಸಿದ್ದರು.