ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಟಿ.ಡಿ.ಕ್ರಾಸ್ನ ಸುಭಾಷ್ ನಗರದ ನಂಜುಂಡ ಯಾನೆ ಪ್ರಸನ್ನ ಬಂಧಿತ ಆರೋಪಿಯಾಗಿದ್ದಾನೆ.
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ವಾರೆಂಟ್ ಆರೋಪಿಯಾದ ನಂಜುಂಡ ಬಿ.ಸಿ ರೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಹಾಗೂ ಸಿಬ್ಬಂದಿಗಳಾದ ಸುರೇಶ್ ಪಡಾರ್ ಹಾಗೂ ದೇವಪ್ಪ ಅವರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.