ಮಂಗಳೂರು: ನಗರದ ಲಾಡ್ಜ್ ವೊಂದರಲ್ಲಿದ್ದ ಅನುಮಾನಾಸ್ಪದ ವ್ಯಕ್ತಿಗಳ ಸಹಿತ ಕಾರುವೊಂದನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪಂಪ್ವೆಲ್ ಬಳಿಯ ಲಾಡ್ಜ್ ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿದ್ದು, ಒಟ್ಟು 9 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ವ್ಯಕ್ತಿಗಳಿಂದ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಹಾಗೂ Govt of India ಎಂಬ ಫಲಕವಿರುವ ಕಾರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಈ ಅನುಮಾನಾಸ್ಪದ ವ್ಯಕ್ತಿಗಳನ್ನು, ಹಿರಿಯ ಪೊಲೀಸ್ ಅಧಿಕಾರಿಗಳು ಸಹಿತ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಜನರನ್ನು ಬೆದರಿಸಿ ನಕಲಿ ಫಲಕಗಳನ್ನು ಹಾಕಿಕೊಂಡು ಹಣ ವಸೂಲಿ ಮಾಡುವ ದಂಧೆ ನಡೆಸುತ್ತಿದ್ದರು ಎಂದು ಶಂಕಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.