Recent Posts

Monday, January 20, 2025
ಸುದ್ದಿ

ಜನತಾ ಪ್ರೌಢಶಾಲೆ ಅಡ್ಯನಡ್ಕ: ರಕ್ಷಕ ಶಿಕ್ಷಕ ಸಂಘದ ಸಭೆ – ಕಹಳೆ ನ್ಯೂಸ್

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ರಕ್ಷಕ – ಶಿಕ್ಷಕ ಸಂಘದ ಸಭೆಯು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದ ಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.

ಹಿರಿಯ ಶಿಕ್ಷಕರಾದ ಎಸ್. ರಾಜಗೋಪಾಲ ಜೋಶಿ ಕಾರ್ಯಕ್ರಮ ನಿರೂಪಿಸಿ, ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ವಂದಿಸಿದರು.