ನವದೆಹಲಿ : ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು 2019ರ ಡಿಸೆಂಬರ್ 8ರಂದು ಸೆಂಟ್ರಲ್ ಟೀಚರ್ ಎಲಿಜಿಬಿಲಿಟಿ ಟೆಸ್ಟ್ ನಡೆಸುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಂದು ಅಧಿಕೃತ ವೆಬ್ ಸೈಟ್‍ನಲ್ಲಿ ಹೊರಡಿಸಿದೆ.
ಆಗಸ್ಟ್ 19ರಿಂದ ಸೆಪ್ಟೆಂಬರ್ 18ರ ತನಕ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸಲು ಸೆಪ್ಟೆಂಬರ್ 23ರ ಗಡುವು ನೀಡಲಾಗಿದೆ. ದೇಶಾದ್ಯಂತ ಒಟ್ಟು 110 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಿಬಿಎಸ್‍ಇಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂದಿನ ವಾರದಲ್ಲಿ ಸಿಇಟಿ ಪರೀಕ್ಷೆ ಪ್ರಕ್ರಿಯೆ ಬಗೆಗಿನ ಪೂರ್ಣ ಮಾಹಿತಿಯಿರುವ ಕೈಪಿಡಿಯನ್ನು ಸಿಬಿಎಸ್‍ಇ ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಮಾಡಲಿದೆ. ಕನ್ನಡ ಸೇರಿದಂತೆ 20 ಭಾಷೆಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. ಕೇಂದ್ರ ಸರ್ಕಾರದ, ಕೇಂದ್ರಾಡಳಿತ ಪ್ರದೇಶದ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ctet.nic.in ಗೆ ಭೇಟಿ ನೀಡಬಹುದು.