Wednesday, January 22, 2025
ಸುದ್ದಿ

ಪಾಕಿಸ್ಥಾನಕ್ಕೆ ಸ್ಯಾಟೆಲೈಟ್ ಕರೆ ಪ್ರಕರಣ: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧಿಸಿಲ್ಲ – ಕಹಳೆ ನ್ಯೂಸ್

ಬೆಳ್ತಂಗಡಿಯಲ್ಲಿ ಪಾಕಿಸ್ಥಾನಕ್ಕೆ ಸ್ಯಾಟಲೈಟ್ ಕರೆ ಹೋಗಿದೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗಿದ್ದು ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ರಾಷ್ಟ್ರೀಯ ತನಿಖಾ ದಳವು ಒಬ್ಬಾತನನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ. ಇಂತಹ ಯಾವುದೇ ಘಟಣೆಯು ವರದಿಯಾಗಿರುವುದಿಲ್ಲ ಹಾಗೂ ಬೆಳ್ತಂಗಡಿಯಿಂದ ಪಾಕಿಸ್ತಾಕ್ಕೆ ಕರೆ ಹೋಗಿರುವ ಅಥವಾ ಮಾಡಿರುವ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಪತ್ರಿಕಾ ಪ್ರಕಟನೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು