Thursday, January 23, 2025
ಸುದ್ದಿ

ಟೆಸ್ಟ್ ಶ್ರೇಯಾಂಕ: ನಂ.1 ಪಟ್ಟಕ್ಕೆ ಕೊಹ್ಲಿಗೆ ಸ್ಮಿತ್ ಪೈಪೋಟಿ – ಕಹಳೆ ನ್ಯೂಸ್

ದುಬೈ : ಆ್ಯಷಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟೆಸ್ಟ್ ಶ್ರೇಯಾಂಕ ಬಿಡುಗಡೆಗೊಂಡಿದ್ದು, ಆಸೀಸ್ ಕ್ರಿಕೆಟಿಗ ಸ್ಟೀವ್ ಸ್ಮಿತ್ ಇದೀಗ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ. ಆ್ಯಷಸ್ ಸರಣಿಯ ಮೊದಲೆರಡು ಟೆಸ್ಟ್‍ಗಳಲ್ಲಿ ಪ್ರಚಂಡ ಪ್ರದರ್ಶನ ತೋರಿದ ಆಸ್ಪ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, ಐಸಿಸಿ ಟೆಸ್ಟ್ ಬ್ಯಾಟ್ಸ್ ಮನ್‍ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಲಂಕಾ ವಿರುದ್ಧ ಮೊದಲ ಟೆಸ್ಟ್ ನ ಎರಡೂ ಇನ್ನಿಂಗ್ಸ್ ಗಳಲ್ಲಿ ವೈಫಲ್ಯ ಕಂಡ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್‍ರನ್ನು ಸ್ಟೀವ್ ಸ್ಮಿತ್ ಹಿಂದಿಕ್ಕಿದ್ದಾರೆ. ವಿಲಿಯಮ್ಸನ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 922 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದು, ಸ್ಮಿತ್ 913 ಅಂಕ ಗಳಿಸಿದ್ದಾರೆ. ಕೊಹ್ಲಿ ಹಾಗೂ ಸ್ಮಿತ್ ನಡುವೆ ಕೇವಲ 9 ಅಂಕಗಳ ಅಂತರವಿದ್ದು, ವಿಂಡೀಸ್ ವಿರುದ್ಧ ಸರಣಿಯಲ್ಲಿ ವಿರಾಟ್ ಉತ್ತಮ ಆಟವಾಡಬೇಕಿದೆ. ಆ್ಯಷಸ್ ಸರಣಿಯಲ್ಲಿ 3 ಪಂದ್ಯಗಳು ಬಾಕಿ ಇದ್ದು, ಸ್ಮಿತ್ ಅಗ್ರಸ್ಥಾನಕ್ಕೆರುವ ನಿರೀಕ್ಷೆಯಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬೌಲಿಂಗ್ ವಿಭಾಗದಲ್ಲಿ ಆಸೀಸ್ ವೇಗಿ ಪ್ಯಾಟ್ ಕಮ್ಮಿನ್ಸ್ ನಂ.1 ಸ್ಥಾನದಲ್ಲೇ ಮುಂದುವರೆದಿದ್ದರೆ, ರವೀಂದ್ರ ಜಡೇಜಾ 6ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಮೇಲೇರಿದ್ದಾರೆ. ಮತ್ತೋರ್ವ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 10ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಆಲ್ರೌಂಡರ್ ವಿಭಾಗದಲ್ಲೂ ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ. ಮೊದಲೆರಡು ಸ್ಥಾನಗಳಲ್ಲಿ ಕ್ರಮವಾಗಿ ಜೇಸನ್ ಹೋಲ್ಡರ್, ಶಕೀಬ್ ಅಲ್ ಹಸನ್ ಮುಂದುವರೆದಿದ್ದಾರೆ.