ಹೊಸದಿಲ್ಲಿ: ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 2ರ ಗಗನನೌಕೆ ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಗೆ ಪ್ರವೇಶಿಸಿದೆ. ಈವರೆಗೆ ಭೂಕಕ್ಷೆಯಲ್ಲಿದ್ದ ನೌಕೆಯನ್ನು ಇಂದು ಬೆಳಿಗ್ಗೆ 9 ಗಂಟೆ 2 ನಿಮಿಷಕ್ಕೆ ಚಂದ್ರನ ಕಕ್ಷೆಗೆ ಪ್ರವೇಶಿಸಿಸಲಾಗಿದೆ.
ಕಕ್ಷೆ ಬದಲಾವಣೆ ಕೆಲಸ ಇಲ್ಲಿಗೆ ಮುಗಿಯುವುದಿಲ್ಲ. ಚಂದ್ರನ ನಿಗಧಿತ ಕಕ್ಷೆಗೆ ನೌಕೆ ತಲುಪುವುದಕ್ಕೆ ಇನ್ನು ನಾಲ್ಕು ಕಾರ್ಯಾಚರಣೆ ನಡೆಸಬೇಕಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ. ಇಂದು ಬೆಳಿಗ್ಗೆ 11 ಗಂಟೆಗೆ ಇಸ್ರೋ ಅಧ್ಯಕ್ಷ ಕೆ.ಸಿವನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.