ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಕೊನೆಗೆ ಪರಿಹಾರದ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ 2034 ಕೋಟಿಯನ್ನು ಬರಪರಿಹಾರಕ್ಕಾಗಿ ಕೇಳಿಕೊಂಡು ಮನವಿ ಮಾಡಿತ್ತು. ಆದರೇ ಕೇಂದ್ರ ಸರ್ಕಾರದಿಂದ 1,029 ಕೋಟಿ ರೂಪಾಯಿಯನ್ನು ಇಂದು ಬಿಡಗಡೆ ಮಾಡಿದೆ.
ರಾಜ್ಯದಲ್ಲಿ ಕಳೆದ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ನೆರೆ, ಪ್ರವಾಹ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಇಂತಹ ನೆರೆ, ಪ್ರವಾಹಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿಕೊಂಡಿತ್ತು. ಕಳೆದ ಎರಡು ದಿನಗಳ ಹಿಂದೆ ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರದ ಸಚಿವರನ್ನು ಕೋರಿಕೊಂಡಿದ್ದರು.
ಆದರೇ ನೆರೆ, ಪ್ರವಾಹದ ಪರಿಹಾರಕ್ಕಾಗಿ ಹಣ ಬಿಡುಗಡೇ ಮಾಡದೇ, ಕೇಂದ್ರ ಸರ್ಕಾರ ಇದೀಗ ಬರ ಪರಿಹಾರಕ್ಕಾಗಿ 1,029 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂತಹ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ 1,029 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.