Recent Posts

Sunday, January 19, 2025
ಸುದ್ದಿ

ಮೈಸೂರು ದಸರಾ ಗಜಪಯಣಕ್ಕೆ ಚಾಲನೆ ನೀಡುವವರು ಯಾರು – ಕಹಳೆ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ನಾಳೆಯಿಂದ ಚಾಲನೆ ನೀಡಬೇಕಿದೆ. ಆದರೆ ಜಿಲ್ಲೆಯ ಸ್ಥಳೀಯ ಶಾಸಕರು ಅನರ್ಹಗೊಂಡಿದ್ದಾರೆ, ಈ ಭಾಗದಲ್ಲಿ ಯಾವ ಸಚಿವರು ಇಲ್ಲ. ಹೀಗಾಗಿ ದಸರಾ ಗಜಪಯಣಕ್ಕೆ ಸ್ವಾಗತ, ಚಾಲನೆ ನೀಡುವವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿದೆ. ಪ್ರತಿ ವರ್ಷದಂತೆ ಈ ವರ್ಷ ದಸರಾ ನಡೆಸಲು ಸಾಧ್ಯವಾಗುವುದಿಲ್ಲ ಎಂಬ ಅನುಮಾನ ಹುಟ್ಟುಕೊಂಡಿದೆ. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಶುರುವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು