ಆ. 31ರಂದು ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಅಟ್ಟಿ ಮಡಿಕೆ ಉತ್ಸವ, ಶೋಭಾಯಾತ್ರೆ ಹಾಗೂ ವಿವಿಧ ಆಟೋಟ ಸ್ಪರ್ಧೆ – ಕಹಳೆ ನ್ಯೂಸ್
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಯಾದ ವಿಶ್ವ ಹಿಂದೂ ಪರಿಷತ್‍ನ ಸ್ಥಾಪನಾ ದಿನದ ಪ್ರಯುಕ್ತ 11ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಅಗಸ್ಟ್ 31 ರಂದು ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರುಗಲಿದೆ.
ಆಗಸ್ಟ್ 25ರಂದು ಜಿಲ್ಲಾ ಮಟ್ಟದ ಶ್ರೀ ಕೃಷ್ಣ ವೇಷ ಸ್ಪರ್ಧೆ ಹಾಗೂ ಕಬಡ್ಡಿ ಪಂದ್ಯಾಟ ನಡೆಯಲಿದೆ. ಆಗಸ್ಟ್ 31ರಂದು ಮಧ್ಯಾಹ್ನ 3ಗಂಟೆಗೆ ಶೋಭಾಯಾತ್ರೆಯೊಂದಿಗೆ ಮೆರವಣಿಗೆಯಲ್ಲಿ ದಾರಿಯುದ್ದಕ್ಕೂ ಅಟ್ಟಿ ಮಡಕೆ ಒಡೆಯುವ ಸ್ಪರ್ಧೆ ನಡೆಯಲಿದೆ.
ಆಗಸ್ಟ್ 31ರಂದು ಬೆಳಗ್ಗಿನಿಂದಲೇ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಇಂದು ಸುದ್ದಿಗೋಷ್ಠಿಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಸುಭಾಷ್ ರೈ ತಿಳಿಸಿದ್ದಾರೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದ್ದಾರೆ.