Sunday, November 24, 2024
ಸುದ್ದಿ

ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸಿಎಂ ಯಡಿಯೂರಪ್ಪ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್‍ಗಳಿಗೆ ಡೆಲಿವರಿ ಪಾಯಿಂಟ್‍ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್‍ನಿಂದ 400 ಲೀಟರ್‍ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್, ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್‍ನಿಂದ 400 ಲೀಟರ್‍ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್‍ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು