Recent Posts

Tuesday, November 26, 2024
ಸುದ್ದಿ

ಭಾರತದ ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು – ಕಹಳೆ ನ್ಯೂಸ್

ಬೆಂಗಳೂರು: ಭಾರತದ ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಕೂಡ ಸೇರಿಕೊಂಡಿದೆ. ರಾಷ್ಟ್ರೀಯ ಸ್ವಚ್ಛ ಗಾಳಿ ಕಾರ್ಯಕ್ರಮ ಮಾಡಿದ ಪಟ್ಟಿಯ 102 ನಗರಗಳ ಪೈಕಿ ಬೆಂಗಳೂರು ಒಂದಾಗಿದೆ.

ಕಳೆದ ಐದು ವರ್ಷಗಳಿಂದ ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಕಡಿಮೆಯಾಗಿದೆ ಎಂದು ಪರಿಸರ-ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಉಪ ಕಾರ್ಯದರ್ಶಿ ಸತ್ಯೇಂದ್ರ ಕುಮಾರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಲುಷಿತ ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 10 ಕೋಟಿ ರೂ ಅನುದಾನ ನಿಗದಿ ಪಡಿಸಿದೆ. ಮುಂದಿನ ಕೆಲ ತಿಂಗಳಲ್ಲಿ ಅನುದಾನವನ್ನು ಬೆಂಗಳೂರಿನಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೀಡಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಾಯು ಮಾಲಿನ್ಯವನ್ನು ತಗ್ಗಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕಾಗಿ ಅನುಸರಿಸುವ ಕ್ರಮದ ಬಗ್ಗೆ ರಾಷ್ಟ್ರೀಯ ಹಸಿರು ಮಂಡಳಿಗೆ ವರದಿ ಸಲ್ಲಿಸಲಾಗುವುದು, ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಮತ್ತು ದಾವಣಗೆರೆ ಕೂಡ ಕಲುಷಿತ ನಗರಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.