Monday, November 25, 2024
ರಾಜಕೀಯ

ಸರ್ಕಾರ ಪತನಕ್ಕೆ ಎಚ್‍ಡಿಕೆ ಕಾರಣ: ಬೆಂಬಲ ಕೊಟ್ಟ ಪಕ್ಷಕ್ಕೆ ದ್ರೋಹ ಎಸಗುವುದು ಗೌಡರ ಹುಟ್ಟುಗುಣ; ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ ಸರ್ಕಾರ ಬೀಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ. ಮೈತ್ರಿ ಸರ್ಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರ್ಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಸ್ವಾಯತ್ತೆ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂಬ ದೃಷ್ಟಿಯಲ್ಲಿ ಸರ್ಕಾರ ರಚನೆಗೆ ಒಪ್ಪಿದ್ದೆ. ಆದರೆ ನಾನೇನು ಕುಮಾರಸ್ವಾಮಿ ಸಿಎಂ ಆಗಬಾರದು ಎಂದು ಭಾವಿಸಿಲ್ಲ. ನಾನು 14 ತಿಂಗಳ ಕಾಲ ಸಂಪೂರ್ಣ ಸಹಕಾರ ನೀಡಿದ್ದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ದೇವೇಗೌಡರ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದದ್ದು. ರಾಜಕೀಯ ದುರುದ್ದೇಶದಿಂದ ಮಾಡಿರುವಂತಹ ಸುಳ್ಳು ಆರೋಪವಾಗಿದೆ ಎಂದರು. ನನಗೆ, ಅವರಿಗೆ ರಾಜಕೀಯ ವೈರತ್ವ ಎಂದು ತಿಳಿದಿದ್ದಾರೆ. ನಮ್ಮ ಹೈಕಮಾಂಡ್ ತೀರ್ಮಾನವನ್ನು ನಾನು ಒಪ್ಪಿದ್ದೆ. ನಾನು ಅವರ ಕೆಲಸದಲ್ಲಿ ಯಾವ ಹಸ್ತಕ್ಷೇಪವನ್ನೂ ಮಾಡಿಲ್ಲ. ಇವರ ತಪ್ಪು ಮುಚ್ಚಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.

ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದಿಲ್ಲ. ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಸೇರಿಕೊಂಡುವರು ಯಾರು? ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಜೆಡಿಎಸ್ ನವರೇ ಕಾರಣ. 20-20 ತಿಂಗಳ ಅಧಿಕಾರ ಹಂಚಿಕೆಯಲ್ಲಿ ಕೊಟ್ಟ ಮಾತನ್ನು ತಪ್ಪಿ ವಚನಭ್ರಷ್ಟರಾದವರು ಯಾರು? ಇವರಿಗೆ ಯಾವ ಪಕ್ಷ ಬೆಂಬಲ ಕೊಡುತ್ತೋ ಆ ಪಕ್ಷದ ಬೆಂಬಲ ವಾಪಸ್ ಪಡೆಯುವುದೇ ದೇವೇಗೌಡ ಮತ್ತು ಮಕ್ಕಳ ಹುಟ್ಟುಗುಣ ಎಂದು ಗುಡುಗಿದರು.