Recent Posts

Monday, January 20, 2025
ರಾಜಕೀಯಸುದ್ದಿ

ನಳಿನ್ ಪದಗ್ರಹಣಕ್ಕೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ – ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರಿನಲ್ಲಿ ರವಿವಾರ ನಡೆಯಲಿರುವ ನಳಿನ್ ಕುಮಾರ್ ಕಟೀಲು ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ತೆರಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತೀ ವಿಧಾನಸಭಾ ಕ್ಷೇತ್ರದಿಂದ ನೂರಕ್ಕೂ ಅಧಿಕ ಕಾರ್ಯಕರ್ತರು ತೆರಳಲು ಈಗಾಗಲೇ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಎಲ್‍ಇಡಿ ಪರದೆ ಮೂಲಕ ಸಮಾರಂಭ ವೀಕ್ಷಣೆಗೂ ಚಿಂತನೆ ನಡೆಸಲಾಗಿದೆ.

ನಳಿನ್ ಹೊಸದಿಲ್ಲಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು. ಇದಲ್ಲದೆ ಪಕ್ಷದ ರಾಷ್ಟೀಯಾಧ್ಯಕ್ಷ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿ ಮಾರ್ಗದರ್ಶನ ಕೋರಲಿದ್ದಾರೆ.