Recent Posts

Monday, January 20, 2025
ಸುದ್ದಿ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್- ಕಹಳೆ ನ್ಯೂಸ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಅಕ್ರಮ ಡಿನೋಟಿಫಿಕೇಷನ್ ಭೂತ ಕಾಡುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ 30 ಗುಂಟೆ ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಸಂಬಂಧ ಮೈಸೂರಿನ ಎಂ.ಗಂಗರಾಜು ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ವಿಚಾರಣೆಗೆ ಅಂಗೀಕರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದರಾಮಯ್ಯ ಹಾಗೂ ಇತರರಿಗೆ ಇದೇ ಸೆಪ್ಟೆಂಬರ್ 23ಕ್ಕೆ ಕೋರ್ಟ್‍ಗೆ ಹಾಜರಾಗುವಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

1997ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೈಸೂರಿನ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಆಗಿದ್ದ 10 ಗುಂಟೆ ಜಮೀನು ಖರೀದಿಸಿದ್ದರು. ನಂತರ 2003ರಲ್ಲಿ ಮನೆ ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು. ಈ ಪ್ರಕರಣವನ್ನು ಮೈಸೂರಿನ ಲಕ್ಷ್ಮಿಪುರಂ ಪೊಲೀಸರ ಬಿ ರಿಪೋರ್ಟ್ ಹಾಕಿದ್ದರು.

ಆದರೆ ಇದೀಗ ಜನಪ್ರತಿನಿಧಿಗಳ ಕೋರ್ಟ್, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕಾರ ಮಾಡಿದ್ದು, ವಿಚಾರಣೆಗೆ ಅಸ್ತು ಎಂದಿದೆ. ಈ ಮೂಲಕ ಸಿದ್ದರಾಮಯ್ಯಗೆ ಮತ್ತೆ ಭೂ ಸಂಕಷ್ಟ ಎದುರಾಗಿದೆ.