Sunday, November 24, 2024
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್‍ನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಐಟಿ ಸಂಬಂಧಿ ಎರಡು ದಿನದ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಪಂಚದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ತ್ವರಿತಗತಿಯಲ್ಲಾಗುತ್ತಿದೆ, ಇದರಿಂದ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ಜೊತೆಗೆ ಕೌಶಲ್ಯವನ್ನು ವೃದ್ಧಿಸುವ ಮುಖೇನ ಯಾವುದೇ ಕ್ಷೇತ್ರದಲ್ಲಾದರೂ ನುರಿತರಾಗಲು ಸಾಧ್ಯ ಎಂದು ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ. ಎಂ.ಎಸ್.ಗೋವಿಂದೇ ಗೌಡ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗಿಂತ ಮೊಬೈಲ್ ತಂತ್ರಜ್ಞಾನಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೀಗಾಗಿ ಶಿಕ್ಷಕರು ಆಧುನಿಕ ವಸ್ತುಗಳ ಬಗೆಗೆ ವಿಶೇಷ ಜ್ಞಾನ ಪಡೆಯುವ ಅವಶ್ಯಕತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ. ಜಯರಾಮ್ ಭಟ್ ಮಾತನಾಡಿ, ತಂತ್ರಜ್ಞಾನದ ಕ್ರಾಂತಿಯಿಂದಾಗಿ ಜಗತ್ತಿನಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಜೊತೆಗೆ ಇದರಿಂದ ವಂಚನೆಗೊಳಗಾದ ಪ್ರಕರಣಗಳು ಬೆಳಕಿಗೆ ಬರುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಇದನ್ನು ಸವಾಲಾಗಿ ಸ್ವೀಕರಿಸಿ ಇಂತಹ ಘಟನೆಗಳನ್ನು ತಡೆಯುವ ಪ್ರಯತ್ನಗಳನ್ನು ಮಾಡಬೇಕು ಎಂದರು.

ಐ.ಕ್ಯು.ಎ.ಸಿ. ಘಟಕದ ಸಂಯೋಜಕ ಡಾ.ಹೆಚ್.ಜಿ.ಶ್ರೀಧರ್ ಮತ್ತು ಐ.ಟಿ. ಕ್ಲಬ್‍ನ ಸಂಯೋಜಕ ಗುರುಕಿರಣ್ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಸುಚಿತ್ರಾ ವಂದಿಸಿದರು. ವಿದ್ಯಾರ್ಥಿನಿಯರಾದ ಲಿಖಿತಾ ಮತ್ತು ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದ ಮೊದಲ ದಿನ ‘ಐ.ಒ.ಟಿ. ಅಪ್ಲಿಕೇಶನ್ಸ್’ ಕುರಿತು ಉಪನ್ಯಾಸ ನಡೆಯಿತು. ಎರಡನೇ ದಿನ ‘ಮೊಬೈಲ್ ಅಪ್ಲಿಕೇಶನ್ ಡೆವೆಲಪ್‍ಮೆಂಟ್’ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.