ಉಡುಪಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಸುಪ್ರಸಿದ್ಧ ಶೃಂಗೇರಿ ಶಾರದಾ ಪೀಠ ಹಾಗೂ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಗುಜರಾತ್‌ನಲ್ಲಿ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿದ ಉದ್ದೇಶ ಯಶಸ್ವಿಯಾದ ಹಿನ್ನೆಲೆಯಲ್ಲಿ, ಮೃದು ಹಿಂದುತ್ವ ಧೋರಣೆಯನ್ನೇ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿಯೂ ಪ್ರಯೋಗಿಸಲು ನಿರ್ಧರಿಸಿದ್ದಾರೆ. ರಾಜ್ಯ ಪ್ರವಾಸದ ಸಂದರ್ಭದಲ್ಲಿ ಸುಪ್ರಸಿದ್ಧ ಶೃಂಗೇರಿ ಶಾರದಾ ಪೀಠ ಹಾಗೂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೂಲಕ ಹಿಂದೂ ಮಠ ಹಾಗೂ ದೇವಸ್ಥಾನಗಳ ಯಾತ್ರೆ ಆರಂಭಿಸಲಿದ್ದಾರೆ.
ಫೆಬ್ರವರಿಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್, 20 ಅಥವಾ 21 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆಂದು ತಿಳಿದುಬಂದಿದೆ. ಉಡುಪಿಗೆ ತೆರಳುವ ಮುನ್ನ ಶೃಂಗೇರಿ ಶಾರದಾ ಪೀಠಕ್ಕೂ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.