Wednesday, January 22, 2025
ಸುದ್ದಿ

ಮಂಗಳೂರಿನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿಯಿಂದ ಕಾಣೆಯಾದ ಸದಾಶಿವ ಎಂಬವರ ಶವ ಪಣಂಬೂರು ತೀರದಲ್ಲಿ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಉಳ್ಳಾಲ ಸೇತುವೆ ಬಳಿ ಬೈಕ್ ಇರಿಸಿ ನಾಪತ್ತೆಯಾಗಿದ್ದ ಕಡಬ ತಾಲೂಕು ನೂಜಿಬಾಳ್ತಿಲ ನಿವಾಸಿ ಸದಾಶಿವ (26) ಎಂಬ ಯುವಕನ ಮೃತದೇಹವು ಸಮುದ್ರ ದಡದಿಂದ 12 ಕಿ.ಮೀ. ದೂರದಲ್ಲಿ ರವಿವಾರ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರವಿವಾರ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಎನ್‍ಎಂಪಿಟಿ ಬಂದರಿನಿಂದ ಸುಮಾರು 12 ಕಿ.ಮೀ ದೂರ ಸಮುದ್ರದಲ್ಲಿ ಶವವೊಂದು ತೇಲುತ್ತಿತ್ತು. ಕೂಡಲೇ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಪರಿಶೀಲನೆ ನಡೆಸಿದಾಗ ನಾಪತ್ತೆಯಾದ ಸದಾಶಿವ ಎಂಬಾತನೆಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತದೇಹದಲ್ಲಿದ್ದ ರೈನ್‍ಕೋಟ್, ಕೈಯಲ್ಲಿ ಹಾಕಿದ್ದ ಕಡಗ ಮತ್ತು ಟ್ಯಾಟೂಗಳು ಸದಾಶಿವ ಅವರದ್ದೇ ಎಂದು ಸಂಬಂಧಿಕರು ಗುರುತು ಹಿಡಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಪೋಲಿಸರ ತನಿಖೆ ನಂತರ ಕಡಬದ ಮನೆಗೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.

ಸದಾಶಿವ ಅವರು ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ನೀರು ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಆಗಸ್ಟ್ 16ರ ರಾತ್ರಿ ನಾಪತ್ತೆಯಾಗಿದ್ದರು. ಅವರ ಬೈಕ್ ಉಳ್ಳಾಲ ಸೇತುವೆ ಬಳಿ ಪತ್ತೆಯಾಗಿದ್ದು, ಅದರಲ್ಲಿದ್ದ ದಾಖಲೆಯನ್ನು ಪರಿಶೀಲಿಸಿದಾಗ ಸದಾಶಿವ ಅವರ ವಿಳಾಸ ಪತ್ತೆಯಾಗಿತ್ತು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.