Wednesday, January 22, 2025
ಸುದ್ದಿ

ಆ. 29ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ –ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಮಹಾ ಸಭೆಯು ಆಗಸ್ಟ್ 29ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪೂರ್ವಾಹ್ನ ಘಂಟೆ 9.30 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ಆಲ್ಫ್ರೆಡ್ ಜೆ ಪಿಂಟೊ ವಹಿಸಲಿದ್ದು, ಪುತ್ತೂರು ವಿಭಾಗದ ಡಿವೈಎಸ್‍ಪಿ ದಿನಕರ ಶೆಟ್ಟಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ‘ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯಲ್ಲಿ ಪೋಷಕರ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಕ್ಯಾಂಪಸ್ ನಿರ್ದೇಶಕ ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ ಶುಭಾಶಂಸನೆಗೈಯಲಿದ್ದಾರೆ. ಕಾರ್ಯಕ್ರಮವನ್ನು ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾರ್ಗದರ್ಶನದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಒಲಿವೆರ ಮತ್ತು ಕಾರ್ಯದರ್ಶಿ ಎಡ್ವಿನ್ ಡಿ’ಸೋಜ ಸಂಯೋಜಿಸಲಿದ್ದಾರೆ. ಅಪರಾಹ್ನ ವಿದ್ಯಾರ್ಥಿಗಳ ಪ್ರಗತಿ ಪರಾಮರ್ಶೆ-ಪ್ರಾಧ್ಯಾಪಕರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳ ಪೋಷಕರು ಎಲ್ಲಾ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳಬೇಕಾಗಿ ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು