Thursday, January 23, 2025
ಸುದ್ದಿ

ಒಡಿಯೂರಿನಲ್ಲಿ ಕಳೆಗಟ್ಟಿದ ಮುದ್ದುಕೃಷ್ಣ ವೇಷ ಸ್ಪರ್ಧೆ – ಕಹಳೆ ನ್ಯೂಸ್

ಒಡಿಯೂರು: “ಅರಿಷಡ್ವೈರಿಗಳನ್ನು ಶೂನ್ಯಗೊಳಿಸಿದಾಗ ಭಗವಂತನ ಕೈಸೇರುವ ಕೊಳಲು ನಾವಾಗುತ್ತೇವೆ; ಪರಿಶುದ್ಧವಾದ ಬೆಣ್ಣೆಯೂ ನಾವಾಗಬಹುದು. ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ ಮತ್ತು ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳಿವಿನ ಹರಿಕಾರರಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು.” ಎಂದು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಜಿ ಶ್ರೀಗುರುದೇವ ಜ್ಞಾನಮಂದಿರದಲ್ಲಿ ಜೈ ಗುರುದೇವ ಕಲಾಕೇಂದ್ರ, ಒಡಿಯೂರು ಆಯೋಜಿಸಿದ್ದ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಆಶೀರ್ವಚನಗೈದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಧ್ವಿ ಶ್ರೀ ಮಾತಾನಂದಮಯಿಯವರು ಉಪಸ್ಥಿತರಿದ್ದರು. ಯಶವಂತ್ ವಿಟ್ಲ ಹಾಗೂ ಕಿರಣ್ ಆರ್ಟಿಸ್ಟ್ ತೀರ್ಪುಗಾರರಾಗಿ ಸಹಕರಿಸಿದರು. ಕಲಾಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಒಡಿಯೂರು ಸ್ವಾಗತಿಸಿ, ಕಾರ್ಯದರ್ಶಿ ಸುಖೇಶ್ ಭಂಡಾರಿ ವಂದಿಸಿದರು. ಒಡಿಯೂರು ಗ್ರಾಮವಿಕಾಸ ಯೋಜನೆಯ ಬಂಟ್ವಾಳ ಮೇಲ್ವಿಚಾರಕ ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು