Sunday, November 24, 2024
ಸುದ್ದಿ

ನೆರೆ ಪರಿಹಾರಕ್ಕೆ ಕೇಂದ್ರದಿಂದ ರಾಜ್ಯಕ್ಕೆ ಸಿಗುತ್ತಾ ವಿಶೇಷ ಪ್ಯಾಕೇಜ್ – ಕಹಳೆ ನ್ಯೂಸ್

ಬೆಂಗಳೂರು : ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಮಧ್ಯಂತರ ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ದೆಹಲಿಯಿಂದ ಆಗಮಿಸಿರುವ ಅಧಿಕಾರಿಗಳ ತಂಡ ಆಸಕ್ತಿ ತೋರಿದ್ದು, ರಾಜ್ಯದ ಸಂಸದರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೇಂದ್ರದ ಅಧ್ಯಯನ ತಂಡ ನೀಡಿರುವ ಅಭಿಪ್ರಾಯವನ್ನು ಸಚಿವರು ವಿಚಾರ ವಿನಿಯಮ ಮಾಡಿಕೊಂಡಿದ್ದಾರೆ. ಇದೇ ವೇಳೆ ನೆರೆ ಪರಿಹಾರ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಎಲ್ಲ ಸಚಿವರಿಗೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆ ಬಳಿಕ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಅಧ್ಯಯನಕ್ಕೆ ಬಂದಿರುವ ತಂಡಕ್ಕೆ ಒಂದಿಷ್ಟು ಪ್ರಾಥಮಿಕ ಮಾಹಿತಿ ಒದಗಿಸಿದ್ದೆವು. ಮಂಗಳವಾರ ಕೂಡ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು