Recent Posts

Sunday, January 19, 2025
ಸುದ್ದಿ

ಇಂದು ವಿವೇಕಾನಂದ ಕಾಲೇಜಿನಲ್ಲಿ ಎಂ.ಸಿ.ಜೆ ವಿಭಾಗದ ‘ವಿನೂತನ’ ಪಾಕ್ಷಿಕ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿರುವ ವಿನೂತನ ಎಂಬ ಪಾಕ್ಷಿಕ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 27ರಂದು ಕಾಲೇಜಿನಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಟಿ.ಎನ್ ಪಾಕ್ಷಿಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಜಯರಾಮ ಭಟ್ ಎಂ.ಟಿ. ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ಐಕ್ಯುಎಸಿ ಸಂಯೋಜಕ ಡಾ.ಶ್ರೀಧರ ಎಚ್.ಜಿ., ಸ್ನಾತಕೋತ್ತರ ವಿಭಾಗಗಳ ಸಂಯೋಜಕಿ ಡಾ.ವಿಜಯ ಸರಸ್ವತಿ ಉಪಸ್ಥಿತರಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಮೂವತ್ತು ಪುಟಗಳ ಪಾಕ್ಷಿಕ ಪತ್ರಿಕೆ ಪ್ರಕಟಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು